Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:21 - ಕನ್ನಡ ಸತ್ಯವೇದವು C.L. Bible (BSI)

21 ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:21
34 ತಿಳಿವುಗಳ ಹೋಲಿಕೆ  

ಕೆಚ್ಚೆದೆಯ ವೀರರು ಸುಲಿಗೆಯಾಗಿ ಚಿರನಿದ್ರೆಯಲಿಹರು I ಕೈಕತ್ತರಿಸಿದಂತಿರುವರು ಆ ರಣಧೀರರೆಲ್ಲರು II


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ : “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು : ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಅಹಂಕಾರವಿದ್ದಲ್ಲಿ ಅವಮಾನ; ಸ್ವಾರ್ಥ ನಿಗ್ರಹವಿದ್ದಲ್ಲಿ ಸುಜ್ಞಾನ.


ತೊಡಿಸುವೆನು ಅವನ ವೈರಿಗಳಿಗೆ ಲಜ್ಜಾಕವಚವನು I ಮುಡಿಸುವೆನು ಅವನಿಗಾದರೋ ಪ್ರಜ್ವಲ ಕಿರೀಟವನು” II


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: ” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.


ನನ್ನ ಕಣ್ಮುಂದಿದೆ ಈ ಅವಮಾನ ದಿನವೆಲ್ಲ I ಲಜ್ಜೆಯಿಂದ ನಾ ಮುಖ ಮುಚ್ಚಿಕೊಳ್ಳುವಂತಾಗಿದೆಯಲ್ಲಾ II


ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು