Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:22 - ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇವಿುನವರನ್ನೂ ಅಶ್ಶೂರದ ಅರಸನಾದ ಸನ್ಹೇರೀಬನ ಕೈಗೂ ಸುತ್ತಣ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:22
16 ತಿಳಿವುಗಳ ಹೋಲಿಕೆ  

ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು.


ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು