Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:23 - ಕನ್ನಡ ಸತ್ಯವೇದವು C.L. Bible (BSI)

23 ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಲು ದೊಡ್ಡವನೆಂದು ಎಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:23
18 ತಿಳಿವುಗಳ ಹೋಲಿಕೆ  

ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.


ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.


ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು