2 ಪೂರ್ವಕಾಲ ವೃತ್ತಾಂತ 32:24 - ಕನ್ನಡ ಸತ್ಯವೇದವು C.L. Bible (BSI)24 ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಆತನು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |