Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:25 - ಕನ್ನಡ ಸತ್ಯವೇದವು C.L. Bible (BSI)

25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದದರಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:25
31 ತಿಳಿವುಗಳ ಹೋಲಿಕೆ  

ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.


‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.


ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬಿಲೋನಿಯದ ಅರಸನೂ ಆದ ಬೆರೋದಕ ಬಲದಾನ ಎಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರ ಅವನಿಗೆ ಪತ್ರವನ್ನೂ ಉಡುಗೊರೆಯನ್ನೂ ಕಳುಹಿಸಿದನು.


ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು