Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:28 - ಕನ್ನಡ ಸತ್ಯವೇದವು C.L. Bible (BSI)

28 ಆಯಾಜಾತಿಯ ಪಶುಗಳಿಗಾಗಿ ಕೊಟ್ಟಿಗೆಯನ್ನೂ ಆಡುಕುರಿಗಳಿಗಾಗಿ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ ಆಡುಕುರಿಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವಗಳನ್ನೆಲ್ಲಾ ಸಂಗ್ರಹಿಸಲು ಉಗ್ರಾಣಗಳನ್ನು ನಿರ್ಮಿಸಿದನು. ಪಶುಗಳಿಗೂ ಮಂದೆಗಳಿಗೂ ಹಟ್ಟಿಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:28
6 ತಿಳಿವುಗಳ ಹೋಲಿಕೆ  

ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.


ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;


ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು