Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:31 - ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:31
24 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.


ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ಹಿಜ್ಕೀಯನ ಉಳಿದ ಚರಿತ್ರೆಯನ್ನೂ ಅವನ ಭಕ್ತಿಕಾರ್ಯಗಳನ್ನೂ ಆಮೋಚನ ಮಗ ಯೆಶಾಯನ ದರ್ಶನ ಗ್ರಂಥದಲ್ಲಿ ಹಾಗು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು