2 ಪೂರ್ವಕಾಲ ವೃತ್ತಾಂತ 32:33 - ಕನ್ನಡ ಸತ್ಯವೇದವು C.L. Bible (BSI)33 ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹಿಜ್ಕೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬಶ್ಮಶಾನ ಭೂವಿುಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |