Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:9 - ಕನ್ನಡ ಸತ್ಯವೇದವು C.L. Bible (BSI)

9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡು ಇದ್ದ ಅಸ್ಸೀರಿಯದ ಅರಸ ಸನ್ಹೇರೀಬನು ತನ್ನ ಮುಖಾಂತರ ಜುದೇಯದ ಅರಸ ಹಿಜ್ಕೀಯನಿಗೂ ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆಂದು ಹೇಳಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಾದ ಮೇಲೆ ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇವಿುಗೆ ಕಳುಹಿಸಿ ಅವರಿಂದ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇವಿುನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸಮಸ್ತ ಸೈನ್ಯದೊಡನೆ ಲಾಕೀಷ್ ಪಟ್ಟಣದ ಸಮೀಪದಲ್ಲಿ ಪಾಳೆಯ ಮಾಡಿಕೊಂಡಿದ್ದನು. ಅಲ್ಲಿ ತನ್ನ ಸೇವಕರನ್ನು ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ ಮತ್ತು ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದದ ಜನರ ಬಳಿಗೂ ಸಂದೇಶದೊಡನೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:9
9 ತಿಳಿವುಗಳ ಹೋಲಿಕೆ  

ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.


ಅಸ್ಸೀರಿಯದ ಸೇನಾಪತಿಯು ತನ್ನ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.


ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು.


ಲಾಕೀಷ್, ಬೊಚ್ಕತ್, ಎಗ್ಲೋನ್,


ಲಾಕೀಷಿನ ಅರಸ - 1 ಎಗ್ಲೋನಿನ ಅರಸ - 1


“ಅಸ್ಸೀರಿಯದ ಅರಸ ಸನ್ಹೇರೀಬನ ಮಾತಿಗೆ ಕಿವಿಗೊಡಿ; ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಜೆರುಸಲೇಮಿನಲ್ಲಿ ನಿಂತಿದ್ದೀರಿ?


ಮಾರೇಷ, ಜೀಫ್, ಅದೋರೈಮ್, ಲಾಕೀಷ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು