Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:1 - ಕನ್ನಡ ಸತ್ಯವೇದವು C.L. Bible (BSI)

1 ಮನಸ್ಸೆ ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮನಸ್ಸೆಯು ಅರಸನಾದಾಗ ಹನ್ನೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಐವತ್ತೈದು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮನಸ್ಸೆಯು ಪಟ್ಟಕ್ಕೆ ಬಂದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ರಾಜನಾಗಿ ಐವತ್ತೈದು ವರ್ಷ ರಾಜ್ಯಭಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:1
9 ತಿಳಿವುಗಳ ಹೋಲಿಕೆ  

ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ಸರ್ವೇಶ್ವರ ಅವರಿಗೆ ಬಾಲಕರನ್ನು ಪಾಲಕರನ್ನಾಗಿಸಿ, ಹಸುಳೆಗಳು ಅವರನ್ನು ಆಳುವಂತೆ ಮಾಡುವರು.


ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.


ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು