2 ಪೂರ್ವಕಾಲ ವೃತ್ತಾಂತ 33:11 - ಕನ್ನಡ ಸತ್ಯವೇದವು C.L. Bible (BSI)11 ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು. ಅಧ್ಯಾಯವನ್ನು ನೋಡಿ |