Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:15 - ಕನ್ನಡ ಸತ್ಯವೇದವು C.L. Bible (BSI)

15 ಅನ್ಯದೇವತಾ ಪ್ರತಿಮೆಗಳನ್ನು ಹಾಗು ತಾನು ಮಾಡಿಸಿದ್ದ ಸ್ತಂಭವನ್ನು ಸರ್ವೇಶ್ವರನ ಆಲಯದಿಂದ ತೆಗಿಸಿದನು. ಸರ್ವೇಶ್ವರನ ಮಂದಿರವಿರುವ ಗುಡ್ಡದಲ್ಲೂ ಜೆರುಸಲೇಮಿನಲ್ಲೂ ಕಟ್ಟಿಸಿದ್ದ ಎಲ್ಲ ಯಜ್ಞವೇದಿಗಳನ್ನು ಕೆಡವಿ, ಅವುಗಳನ್ನು ಪಟ್ಟಣದ ಹೊರಗೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನ್ಯದೇವತಾಪ್ರತಿಮೆಗಳನ್ನೂ ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗಿಸಿ ಯೆಹೋವಮಂದಿರವಿರುವ ಗುಡ್ಡದಲ್ಲಿಯೂ ಯೆರೂಸಲೇವಿುನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅನ್ಯದೇವತೆಗಳ ವಿಗ್ರಹವನ್ನು ತೆಗಿಸಿದನು; ದೇವಾಲಯದೊಳಗಿದ್ದ ವಿಗ್ರಹವನ್ನು ತೆಗೆದುಹಾಕಿಸಿದನು. ಜೆರುಸಲೇಮಿನಲ್ಲಿಯೂ ದೇವಾಲಯದ ಗುಡ್ಡದಲ್ಲಿಯೂ ಪ್ರತಿಷ್ಠಾಪಿಸಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಕಟ್ಟಿಸಿದ ಎಲ್ಲಾ ವೇದಿಕೆಗಳನ್ನು ಜೆರುಸಲೇಮಿನಿಂದ ಹೊರಗೆ ಬಿಸಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:15
8 ತಿಳಿವುಗಳ ಹೋಲಿಕೆ  

ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು