2 ಪೂರ್ವಕಾಲ ವೃತ್ತಾಂತ 33:19 - ಕನ್ನಡ ಸತ್ಯವೇದವು C.L. Bible (BSI)19 ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |