Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:20 - ಕನ್ನಡ ಸತ್ಯವೇದವು C.L. Bible (BSI)

20 ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:20
9 ತಿಳಿವುಗಳ ಹೋಲಿಕೆ  

ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,


ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಆಮೋನನು ಅರಸನಾದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು.


ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).


ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು