Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:24 - ಕನ್ನಡ ಸತ್ಯವೇದವು C.L. Bible (BSI)

24 ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನ ಸೇವಕರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:24
10 ತಿಳಿವುಗಳ ಹೋಲಿಕೆ  

ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಆದರೆ ನಾಡಿನ ಜನರು ಅರಸ ಆಮೋನನಿಗೆ ವಿರುದ್ಧ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು