2 ಪೂರ್ವಕಾಲ ವೃತ್ತಾಂತ 34:11 - ಕನ್ನಡ ಸತ್ಯವೇದವು C.L. Bible (BSI)11 ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳಲು ಹಾಗು ಜುದೇಯ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಕಟ್ಟಲು, ಅಂತು ದೇವಾಲಯವನ್ನು ದುರಸ್ತಿಮಾಡಿ ಭದ್ರಪಡಿಸಲು ಬಡಗಿಗಳಿಗೂ ಶಿಲ್ಪಿಗಳಿಗೂ ಆ ಹಣವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಯೆಹೂದರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವದಕ್ಕಾಗಿಯೂ ಅಂತು ದೇವಾಲಯವನ್ನು ಜೀರ್ಣೋದ್ಧಾರಮಾಡಿ ಭದ್ರಪಡಿಸುವದಕ್ಕೆ ಬಡಗಿಯವರಿಗೂ ಶಿಲ್ಪಿಯವರಿಗೂ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಡಗಿಗಳಿಗೂ ಮೇಸ್ತ್ರಿಗಳಿಗೂ ಈ ಹಣದಿಂದ ಸಂಬಳ ಕೊಟ್ಟರು; ಬೇಕಾಗಿದ್ದ ಕಲ್ಲುಗಳನ್ನೂ ಮರದ ತೊಲೆಗಳನ್ನೂ ಇತರ ವಸ್ತುಗಳನ್ನೂ ಕೊಂಡುಕೊಂಡರು. ಹಿಂದಿನ ಕಾಲದಲ್ಲಿ ಯೆಹೂದದ ಅರಸರು ಯೆಹೋವನ ದೇವಾಲಯವನ್ನು ಸರಿಪಡಿಸುವುದರ ಬಗ್ಗೆ ಹೆಚ್ಚು ಗಮನಕೊಟ್ಟಿರಲಿಲ್ಲ. ಆದ್ದರಿಂದ ಕಟ್ಟಡವು ಹಳೆಯದಾಗಿ ಬೀಳುವ ಸ್ಥಿತಿಯಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |