Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:20 - ಕನ್ನಡ ಸತ್ಯವೇದವು C.L. Bible (BSI)

20 “ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಸಹಕಾರಿಯಾದ ಅಸಾಯ ಎಂಬವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:20
10 ತಿಳಿವುಗಳ ಹೋಲಿಕೆ  

ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,


“ಅಮ್ಮೋನ್ಯರ ಅರಸ ಬಾಲೀಸನು ನಿಮ್ಮನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕಳಿಸಿದ್ದಾನೆ ಎಂಬುದು ನಿಮಗೆ ಗೊತ್ತಿದೆಯೇ?” ಎಂದು ಕೇಳಿದರು. ಆದರೆ ಅಹೀಕಾಮನ ಮಗ ಗೆದಲ್ಯನು ಅವರನ್ನು ನಂಬಲಿಲ್ಲ.


ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.


ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.


ಅರಸ ಯೋಷೀಯನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ,


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡುಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು