Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:24 - ಕನ್ನಡ ಸತ್ಯವೇದವು C.L. Bible (BSI)

24 ‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:24
18 ತಿಳಿವುಗಳ ಹೋಲಿಕೆ  

ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


ಆದ್ದರಿಂದ ಇಸ್ರಯೇಲ್ ದೇವರಾದ ಸರ್ವೇಶ್ವರ ಎಂಬ ನಾನು ಜೆರುಸಲೇಮಿನವರ ಮೇಲೂ ಜುದೇಯದವರ ಮೇಲೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಬಿರಿಯುವುವು.


ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:


“ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,


ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಮಿಕಾಯನು ತನ್ನ ಹಾಗೂ ಜನರ ಮುಂದೆ ಗ್ರಂಥ ಸುರುಳಿಯಿಂದ ಬಾರೂಕನು ಓದಿ ಹೇಳಿದ್ದ ಎಲ್ಲ ಮಾತುಗಳನ್ನು ಅವರಿಗೆ ತಿಳಿಸಿದನು.


ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.”


“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು