Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:26 - ಕನ್ನಡ ಸತ್ಯವೇದವು C.L. Bible (BSI)

26 ತಾನು ಕೇಳಿದ ವಾಕ್ಯಗಳ ಬಗ್ಗೆ, ಸರ್ವೇಶ್ವರನ ಬಳಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ: ‘ಇಸ್ರಯೇಲ್ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನಂದರೆ - ಇಸ್ರಾಯೇಲ್‍ದೇವರಾದ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದರೆ ಯೆಹೋವನನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಾದ ಯೋಷೀಯನಿಗೆ ಹೀಗೆ ಹೇಳಿರಿ: ‘ನೀನು ಸ್ವಲ್ಪಕಾಲದ ಹಿಂದೆ ಕೇಳಿದ ವಿಷಯಗಳ ಬಗ್ಗೆ ಇಸ್ರೇಲಿನ ಯೆಹೋವನು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:26
5 ತಿಳಿವುಗಳ ಹೋಲಿಕೆ  

ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು