Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:27 - ಕನ್ನಡ ಸತ್ಯವೇದವು C.L. Bible (BSI)

27 ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:27
24 ತಿಳಿವುಗಳ ಹೋಲಿಕೆ  

ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಅರಸ ಯೋಷೀಯನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ,


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ಸರ್ವೇಶ್ವರ ಇದನ್ನು ನೋಡಿ ಶೆಮಾಯನಿಗೆ, “ಇವರು ತಮ್ಮನ್ನೇ ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪಕಾಲದಲ್ಲೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರ ನನ್ನ ರೌದ್ರವನ್ನು ಜೆರುಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ


ತಾನು ಕೇಳಿದ ವಾಕ್ಯಗಳ ಬಗ್ಗೆ, ಸರ್ವೇಶ್ವರನ ಬಳಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ: ‘ಇಸ್ರಯೇಲ್ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ;


ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.


ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು