2 ಪೂರ್ವಕಾಲ ವೃತ್ತಾಂತ 34:28 - ಕನ್ನಡ ಸತ್ಯವೇದವು C.L. Bible (BSI)28 ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |