Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:32 - ಕನ್ನಡ ಸತ್ಯವೇದವು C.L. Bible (BSI)

32 ಅಂತೆಯೇ ಎಲ್ಲ ಜೆರುಸಲೇಮಿನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು . ಜೆರುಸಲೇಮಿನವರು ಏಕದೇವರಾದ ತಮ್ಮ ಪೂರ್ವಜರ ದೇವರ ನಿಬಂಧನೆಯನ್ನು ಕೈಕೊಳ್ಳುವಂಥವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಮೇಲೆ ಎಲ್ಲಾ ಯೆರೂಸಲೇವಿುನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇವಿುನವರು ಏಕದೇವರಾದ ತಮ್ಮ ಪಿತೃಗಳ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಮೇಲೆ ಎಲ್ಲಾ ಜೆರುಸಲೇಮಿನವರಿಂದಲೂ ಮತ್ತು ಬೆನ್ಯಾಮೀನ್ಯರಿಂದಲೂ ಪ್ರಮಾಣ ಮಾಡಿಸಿದನು. ತಮ್ಮ ಪೂರ್ವಿಕರು ವಿಧೇಯರಾಗಿದ್ದ ದೇವರಿಗೆ ತಾವೂ ವಿಧೇಯರಾಗಿರುವುದಾಗಿ ಅವರು ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:32
11 ತಿಳಿವುಗಳ ಹೋಲಿಕೆ  

ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ.


ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.


ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.


ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು