Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:5 - ಕನ್ನಡ ಸತ್ಯವೇದವು C.L. Bible (BSI)

5 ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಬಲಿಪೀಠಗಳ ಮೇಲೆ ಸುಡಿಸಿ, ಜುದೇಯದ ಮತ್ತು ಜೆರುಸಲೇಮಿನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದದ ಮತ್ತು ಯೆರೂಸಲೇವಿುನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋಷೀಯನು ಬಾಳ್ ದೇವರ ವಿಗ್ರಹಗಳನ್ನೂ ಪೂಜಾರಿಯವರ ಎಲುಬುಗಳನ್ನೂ ಅವರ ವೇದಿಕೆಗಳ ಮೇಲೆಯೇ ಸುಟ್ಟುಬಿಟ್ಟನು. ಹೀಗೆ ಅವನು ಯೆಹೂದವನ್ನು ಮತ್ತು ಜೆರುಸಲೇಮನ್ನು ಶುಚಿಗೊಳಿಸಿದನು ಮತ್ತು ಶುದ್ಧೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:5
10 ತಿಳಿವುಗಳ ಹೋಲಿಕೆ  

ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.


ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು.


ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ, ಆ ಬಲಿಪೀಠದ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು. ಹೀಗೆ ದೈವಪುರುಷನೊಬ್ಬನು ಪ್ರಕಟಿಸಿದ ಸರ್ವೇಶ್ವರನ ವಾಕ್ಯ ನೆರವೇರಿತು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು