ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.
ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.