Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:15 - ಕನ್ನಡ ಸತ್ಯವೇದವು C.L. Bible (BSI)

15 ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್ ಹಾಗು ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದುದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಸಾಫ್ಯರಾದ ಗಾಯಕರು ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವದಕ್ಕೆ ಕಾರಣವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:15
15 ತಿಳಿವುಗಳ ಹೋಲಿಕೆ  

ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ I ಗಮನಕೊಡಿ ನಾ ಹೇಳುವ ಮಾತುಗಳಿಗೆ II


ಮೊರೆಯಿಡುವೆನು, ಕೂಗಿ ಮೊರೆಯಿಡುವೆನು I ಸ್ವಾಮಿ ದೇವನು ನನಗೆ ಕಿವಿಗೊಡುವನು II


ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.


ತರುವಾಯ ತಮಗೆ ಹಾಗು ಯಾಜಕರಿಗೆ ಭೋಜನವನ್ನು ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ದಹನಬಲಿಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದುದರಿಂದ ಲೇವಿಯರು ತಮಗೆ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೂ ಭೋಜನವನ್ನು ಸಿದ್ಧಮಾಡಿದರು.


ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,


ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು