Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:18 - ಕನ್ನಡ ಸತ್ಯವೇದವು C.L. Bible (BSI)

18 ಇಂಥಾ ಪಾಸ್ಕಹಬ್ಬ ಪ್ರವಾದಿ ಸಮುವೇಲನ ದಿವಸಗಳಿಂದ ಇಸ್ರಯೇಲರಲ್ಲಿ ನಡೆದಿರಲಿಲ್ಲ. ಯೋಷೀಯನು, ಯಾಜಕರು, ಲೇವಿಯರು, ಕೂಡಿಬಂದಿದ್ದ ಇಸ್ರಯೇಲರು, ಯೆಹೂದ್ಯರು, ಹಾಗು ಜೆರುಸಲೇಮಿನವರು ಈ ಪಾಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಯೇಲ್ ಅರಸರಲ್ಲಿ ಒಬ್ಬನೂ ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿವಸಗಳಿಂದ ಇಸ್ರಾಯೇಲ್ಯರಲ್ಲಿ ನಡೆಯಲೇ ಇಲ್ಲ. ಯೋಷೀಯನೂ ಯಾಜಕರೂ ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲ್ಯ ಯೆಹೂದ್ಯರೂ ಯೆರೂಸಲೇವಿುನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರವಾದಿಯಾದ ಸಮುವೇಲನ ಕಾಲದಿಂದ ಈ ರೀತಿಯಾಗಿ ಪಸ್ಕಹಬ್ಬವನ್ನು ಎಂದೂ ಆಚರಿಸಿರಲಿಲ್ಲ. ಇಸ್ರೇಲರ ಅರಸರಲ್ಲಿ ಯಾರೂ ಈ ರೀತಿಯಾಗಿ ಹಬ್ಬ ಆಚರಿಸಿರಲಿಲ್ಲ. ಅರಸನಾದ ಯೋಷೀಯ, ಯಾಜಕರು, ಲೇವಿಯರು, ಯೆಹೂದದ ಜನರು, ಇಸ್ರೇಲಿನಿಂದ ಬಂದ ಜನರು ಮತ್ತು ಜೆರುಸಲೇಮಿನ ಜನರು ವಿಶೇಷ ರೀತಿಯಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:18
4 ತಿಳಿವುಗಳ ಹೋಲಿಕೆ  

ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.


ಈ ಪಾಸ್ಕಹಬ್ಬ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು