Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:21 - ಕನ್ನಡ ಸತ್ಯವೇದವು C.L. Bible (BSI)

21 ಯೋಷೀಯನು ಅವನಿಗೆ ವಿರುದ್ಧ ಹೊರಟನು. ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಜುದೇಯದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟಿದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆ ಆಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ನೀನು ಕೈಯೆತ್ತುವುದನ್ನು ಬಿಡು. ಇಲ್ಲವಾದರೆ, ಅವರು ನಿನ್ನನ್ನು ನಾಶಮಾಡುವರು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೋಷೀಯನು ಅವನಿಗೆ ವಿರೋಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ - ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ. ನನ್ನನ್ನು ಮುಂದರಿಸಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ಕೈಯೆತ್ತುವದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:21
7 ತಿಳಿವುಗಳ ಹೋಲಿಕೆ  

ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.


ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.


ಅದಕ್ಕೆ ಯೇಸು, “ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ,” ಎಂದು ಉತ್ತರಕೊಟ್ಟರು.


ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು