Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:25 - ಕನ್ನಡ ಸತ್ಯವೇದವು C.L. Bible (BSI)

25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:25
16 ತಿಳಿವುಗಳ ಹೋಲಿಕೆ  

ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!


ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,


ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!


“ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು ! ಬಾಷಾನಿನಲ್ಲಿ ಮೊರೆಯಿಡು ! ಅಬಾರೀಮಿನಲ್ಲಿ ಕಿರುಚಾಡು ! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು !


ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


ದಾವೀದನು ಸೌಲ-ಯೋನಾತಾನರ ಮೇಲೆ ಒಂದು ಶೋಕಗೀತೆಯನ್ನು ರಚಿಸಿದನು.


ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ, ಮೂರ್ಖರಿಗಾಗುವಂತೆ ನಿನಗೆ ದುರ್ಮರಣವಾಯಿತೇ!


ಯೋಷೀಯನ ಉಳಿದ ಚರಿತ್ರೆ, ಸರ್ವೇಶ್ವರನ ಧರ್ಮಶಾಸ್ತ್ರ ಅನುಸಾರವಾಗಿ ಅವನು ಸಾಧಿಸಿದ ಧಾರ್ಮಿಕ ಸುಧಾರಣೆ ಹಾಗು


ಈ ಸಂಖ್ಯೆಗೆ ಒಳಪಡದ ಅವರ ದಾಸದಾಸಿಯರು 7,337 ಮಂದಿ, ಅವರಲ್ಲಿ ಗಾಯಕರೂ ಗಾಯಕಿಯರೂ 200 ಮಂದಿ ಇದ್ದರು.


ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.


ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.


ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು