Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:12 - ಕನ್ನಡ ಸತ್ಯವೇದವು C.L. Bible (BSI)

12 ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಯೆಹೋವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಚಿದ್ಕೀಯನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ಅವನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದನು. ಪ್ರವಾದಿಯಾದ ಯೆರೆಮೀಯನು ದೇವರ ಸಂದೇಶವನ್ನು ಕೊಡುತ್ತಾ ಬಂದನು. ಆದರೆ ಚಿದ್ಕೀಯನು ದೇವರೆದುರಿಗೆ ತನ್ನನ್ನು ತಗ್ಗಿಸಿಕೊಳ್ಳದೆ ಯೆರೆಮೀಯನ ಮೂಲಕ ಬಂದ ದೇವರ ಆಜ್ಞೆಗಳಿಗೆ ವಿಧೇಯನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:12
16 ತಿಳಿವುಗಳ ಹೋಲಿಕೆ  

ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.


ಚಿದ್ಕೀಯನು ಯೆಹೋಯಾಕೀಮನಂತೆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು