Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:14 - ಕನ್ನಡ ಸತ್ಯವೇದವು C.L. Bible (BSI)

14 ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:14
26 ತಿಳಿವುಗಳ ಹೋಲಿಕೆ  

ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.


ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.


‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.


ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನನ್ನ ಆಲಯದ ಬಗ್ಗೆ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು