15 ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕೆಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ.
ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.
ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.
ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.
ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.
ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.
ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.
‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.