Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:19 - ಕನ್ನಡ ಸತ್ಯವೇದವು C.L. Bible (BSI)

19 ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 [ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:19
22 ತಿಳಿವುಗಳ ಹೋಲಿಕೆ  

ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.


‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.


ನುಂಗಿಬಿಟ್ಟರಾ ಜನರು ಯಕೋಬ ವಂಶದವರನು I ಹಾಳುಮಾಡಿ ಬಿಟ್ಟರವರ ನಿವಾಸ ಸ್ಥಳಗಳನು II


ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು.


ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.


‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು