2 ಪೂರ್ವಕಾಲ ವೃತ್ತಾಂತ 36:22 - ಕನ್ನಡ ಸತ್ಯವೇದವು C.L. Bible (BSI)22 ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.
ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!
"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.