Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:8 - ಕನ್ನಡ ಸತ್ಯವೇದವು C.L. Bible (BSI)

8 ಯೆಹೋಯಾಕೀಮನ ಉಳಿದ ಚರಿತ್ರೆ ಅವನು ನಡಿಸಿದ ಅಸಹ್ಯಕೃತ್ಯಗಳು ಹಾಗು ಅವನಲ್ಲಿ ಕಂಡುಬಂದದ್ದೆಲ್ಲವು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಕೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ನಡಿಸಿದ ಅಸಹ್ಯಕೃತ್ಯಗಳೂ ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋಯಾಕೀಮನು ಮಾಡಿದ ದುಷ್ಕ್ರಿಯೆಗಳೆಲ್ಲಾ ಇಸ್ರೇಲಿನ ಮತ್ತು ಯೆಹೂದದ ರಾಜರುಗಳ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಯೆಹೋಯಾಕೀಮನ ಬದಲು ಯೆಹೋಯಾಕೀನನು ಅರಸನಾದನು. ಇವನು ಯೆಹೋಯಾಕೀಮನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:8
6 ತಿಳಿವುಗಳ ಹೋಲಿಕೆ  

ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.


ಉಳಿದ ಅವನ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಯೇಲರ ರಾಜರ ಗ್ರಂಥದಲ್ಲಿ ಲಿಖಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು