Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:16 - ಕನ್ನಡ ಸತ್ಯವೇದವು C.L. Bible (BSI)

16 ಹಂಡೆ, ಸಲಿಕೆ ಹಾಗೂ ಮುಳ್ಳು, ಹೀಗೆ ಹೂರಾಮಾಬೀಮನು ಅರಸ ಸೊಲೊಮೋನನ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ಕಂಚಿನಿಂದ ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕೋಸ್ಕರ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿ ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹಂಡೆ, ಸಲಿಕೆ, ಮುಳ್ಳು ಇವುಗಳನ್ನೆಲ್ಲಾ ದೇವಾಲಯಕ್ಕಾಗಿ ಸೊಲೊಮೋನನು ಹೇಳಿದಂತೆಯೇ ಮಾಡಿದನು. ಇವೆಲ್ಲವನ್ನು ಹೊಳೆಯುವ ತಾಮ್ರದಿಂದ ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:16
13 ತಿಳಿವುಗಳ ಹೋಲಿಕೆ  

ನಾನು ಈಗ ಜ್ಞಾನಿಯೂ ಕಲಾಪ್ರವೀಣನೂ ಆದ ಒಬ್ಬ ವ್ಯಕ್ತಿಯನ್ನು ಕಳುಹಿಸುತ್ತೇನೆ; ಇವನ ಹೆಸರು ಹೂರಾಮಾಬೀ.


ಇದಲ್ಲದೆ, ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಈ ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಸಾಮಾನುಗಳು ಇವು:


ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,


ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು.


ಪೀಠದ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಅದು ಮಾತ್ರವಲ್ಲ, ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,


ಅರಸನು ಜೋರ್ಡನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯಲ್ಲಿ ಎರಕ ಹೊಯ್ಸಿದನು.


ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು