Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:19 - ಕನ್ನಡ ಸತ್ಯವೇದವು C.L. Bible (BSI)

19 ಅವನು ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿ ಇವು: ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೊಲೊಮೋನನು ದೇವಾಲಯದೊಳಗೆ ಉಪಯೋಗಿಸುವ ಉಪಕರಣಗಳನ್ನು ಮಾಡಿಸಿದನು. ಅವನು ಬಂಗಾರದ ಯಜ್ಞವೇದಿಕೆಯನ್ನು ಮಾಡಿಸಿದನು; ನೈವೇದ್ಯದ ರೊಟ್ಟಿಗಳನ್ನು ಇಡಲು ಮೇಜುಗಳನ್ನು ಮಾಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು, ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಮೇಜುಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:19
21 ತಿಳಿವುಗಳ ಹೋಲಿಕೆ  

ಆರನೆಯ ದೇವದೂತನು ತುತೂರಿಯನ್ನು ಊದಿದನು. ದೇವರ ಸಾನ್ನಿಧ್ಯದಲ್ಲಿ ಇರುವ ಚಿನ್ನದ ಬಲಿಪೀಠದ ನಾಲ್ಕು ಮೂಲೆಗಳಿಂದ ಹೊರಟ ಒಂದು ಶಬ್ದ ನನಗೆ ಕೇಳಿಸಿತು.


ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಹತ್ತು ಮೇಜುಗಳನ್ನು ಮಾಡಿಸಿ ದೇವಾಲಯದೊಳಗೆ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇಡಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಮೀಸಲು ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು