Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:3 - ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ಎರಕಹೊಯ್ಯುವಾಗ ಅದರ (ಅಂಚಿನ) ಕೆಳಗೆ ಸುತ್ತಲೂ ಮೊಳಕ್ಕೆ ಹತ್ತರಂತೆ ಹೋರಿಗಳ ಚಿತ್ರಗಳನ್ನು ಎರಡು ಸಾಲಾಗಿ ಎರಕ ಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದನ್ನು ಎರಕಹೊಯ್ಯುವಾಗ ಅದರ [ಅಂಚಿನ] ಕೆಳಗೆ ಸುತ್ತಲೂ ಮೊಳಕ್ಕೆ ಹತ್ತರಂತೆ ಹೋರಿಗಳ ಚಿತ್ರಗಳನ್ನು ಎರಡು ಸಾಲಾಗಿ ಎರಕ ಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ನೀರಿನ ಪಾತ್ರೆಯನ್ನು ಎರಕ ಹೊಯ್ಯುವಾಗ ಅದರ ಬಾಯಿಯ ಅಂಚಿನ ಕೆಳಗೆ ಸುತ್ತಲೂ ಹೋರಿಯ ಚಿತ್ರವನ್ನು ಎರಡು ಸಾಲಾಗಿ ಹತ್ತು ಮೊಳ ಎರಕ ಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:3
8 ತಿಳಿವುಗಳ ಹೋಲಿಕೆ  

ಮೊದಲನೆಯ ಜೀವಿ ಸಿಂಹದಂತೆ ಇತ್ತು. ಎರಡನೆಯ ಜೀವಿ ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು ಮತ್ತು ನಾಲ್ಕನೆಯ ಜೀವಿಯು ಹಾರುತ್ತಿರುವ ಗರುಡ ಪಕ್ಷಿಯಂತಿತ್ತು.


ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು.


ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.


ನಿನ್ನ ಯೋಧರೆಲ್ಲ ಆರು ದಿವಸಗಳವರೆಗೆ ದಿನಕ್ಕೆ ಒಂದು ಸಾರಿ ನಗರವನ್ನು ಸುತ್ತಲಿ.


ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,


ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮ ದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಕಂಚಿನ ಕಡಲು ಅವುಗಳ ಬೆನ್ನಿನ ಮೇಲಿತ್ತು. ಅವುಗಳ ಹಿಂಭಾಗವು ಒಳಗಡೆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು