2 ಪೂರ್ವಕಾಲ ವೃತ್ತಾಂತ 4:4 - ಕನ್ನಡ ಸತ್ಯವೇದವು C.L. Bible (BSI)4 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮ ದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಕಂಚಿನ ಕಡಲು ಅವುಗಳ ಬೆನ್ನಿನ ಮೇಲಿತ್ತು. ಅವುಗಳ ಹಿಂಭಾಗವು ಒಳಗಡೆಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಬೃಹದಾಕಾರದ ಪಾತ್ರೆಯನ್ನು ಹನ್ನೆರಡು ದೊಡ್ಡ ಎರಕದ ಹೋರಿಗಳ ಮೇಲೆ ಇಡಲಾಗಿತ್ತು. ಇವುಗಳಲ್ಲಿ ಮೂರು ಹೋರಿಗಳು ಪೂರ್ವದ ಕಡೆಗೂ ಮೂರು ಹೋರಿಗಳು ಪಶ್ಚಿಮದ ಕಡೆಗೂ ಮೂರು ಹೋರಿಗಳು ಉತ್ತರದ ಕಡೆಗೂ ಮೂರು ಹೋರಿಗಳು ದಕ್ಷಿಣದ ಕಡೆಗೂ ಮುಖಮಾಡಿ ನಿಂತಿದ್ದವು. ಎಲ್ಲಾ ಹೋರಿಗಳು ಒಂದಕ್ಕೊಂದಕ್ಕೆ ಮತ್ತು ಮಧ್ಯಭಾಗಕ್ಕೆ ಹಿಮ್ಮುಖವಾಗಿ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು. ಅಧ್ಯಾಯವನ್ನು ನೋಡಿ |