Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:6 - ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ಹತ್ತು ಗಂಗಾಳಗಳನ್ನು ಮಾಡಿಸಿ ಸರ್ವಾಂಗಹೋಮಸಮರ್ಪಣೆಯ ಸಾಮಾನು ತೊಳೆದು ಶುದ್ಧಮಾಡುವದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಸಮುದ್ರವೆನಿಸಿಕೊಳ್ಳುವ ಪಾತ್ರೆಯು ಯಾಜಕರ ಸ್ನಾನಕ್ಕಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಈ ಗಂಗಾಳಗಳ ನೀರನ್ನು ಯಜ್ಞ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಯಾಜಕರು ಯಜ್ಞಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:6
16 ತಿಳಿವುಗಳ ಹೋಲಿಕೆ  

ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೊಠಡಿಯೂ ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ದಹನ ಬಲಿಪ್ರಾಣಿಗಳ ಮಾಂಸವನ್ನು ತೊಳೆಯುತ್ತಿದ್ದರು.


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಒಟ್ಟು ಸಾಮಾನುಗಳು ಯಾವುವೆಂದರೆ :-


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.


ಸರ್ವೇಶ್ವರ ಮೋಶೆಗೆ ಮತ್ತೆ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು