Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:2 - ಕನ್ನಡ ಸತ್ಯವೇದವು C.L. Bible (BSI)

2 ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನಂತರ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇವಿುಗೆ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:2
21 ತಿಳಿವುಗಳ ಹೋಲಿಕೆ  

ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.


ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.


ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II


ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ, ತಮ್ಮ ಕುಲಬಂಧುಗಳಾದ ಆರೋನ್ಯರಂತೆ, ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆ ಹಾಗೂ ಯಾಜಕರ ಮತ್ತು ಲೇವಿಯರ ಕುಟುಂಬ ಮುಖ್ಯಸ್ಥರ ಮುಂದೆ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು.


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.


ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.


“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.


ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಆ ಮಂಜೂಷ ನಿಂತಾಗ: “ಮರಳಿ ಬರೋಣವಾಗಲಿ, ಸರ್ವೇಶ್ವರಾ ಸಹಸ್ರಾರು ಇಸ್ರಯೇಲ್ ಕುಟುಂಬಗಳ ಬಳಿಗೆ,” ಎಂದು ಹೇಳುತ್ತಿದ್ದನು.


ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.


ಮೋಶೆಯ ಆಜ್ಞಾನುಸಾರ ಅವರು ಕಾಣಿಕೆಗಳನ್ನೆಲ್ಲ ದೇವದರ್ಶನದ ಗುಡಾರದ ಬಳಿಗೆ ತಂದರು. ಇಸ್ರಯೇಲ್ ಸಮಾಜದವರೆಲ್ಲರು ಹತ್ತಿರಕ್ಕೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತರು.


ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.


ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು