Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:9 - ಕನ್ನಡ ಸತ್ಯವೇದವು C.L. Bible (BSI)

9 ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಪೆಟ್ಟಿಗೆಯನ್ನು ಹೊರಲು ಜೋಡಿಸಿದ್ದ ಕೋಲುಗಳು ಉದ್ದವಾಗಿದ್ದ ಕಾರಣ ಅದರ ಕೊನೆಗಳು ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಕಾಣುತ್ತಿದ್ದವು. ಆದರೆ ದೇವಾಲಯದ ಹೊರಗಿನಿಂದ ಆ ಕೋಲುಗಳು ಯಾರಿಗೂ ಕಾಣುತ್ತಿರಲಿಲ್ಲ. ಇಂದಿಗೂ ಆ ಕೋಲುಗಳು ಅಲ್ಲಿಯೇ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:9
2 ತಿಳಿವುಗಳ ಹೋಲಿಕೆ  

ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಆದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು