Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:1 - ಕನ್ನಡ ಸತ್ಯವೇದವು C.L. Bible (BSI)

1 ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರಾ, ರವಿಯನ್ನು ಆಗಸದಲ್ಲಿ ಸ್ಥಿರವಾಗಿರಿಸಿದ ನೀವು ಆರಿಸಿಕೊಂಡಿರಿ ಕರಿಮೋಡದಲಿ ವಾಸಿಸಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಸೊಲೊಮೋನನು, ಯೆಹೋವನೇ “ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಸೊಲೊಮೋನನು - ಯೆಹೋವನೇ ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಿನಲ್ಲಿ ವಾಸಿಸುತ್ತೇನೆ ಎಂದು ಹೇಳಿರುವೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:1
10 ತಿಳಿವುಗಳ ಹೋಲಿಕೆ  

ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.


ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ನಾ ನಿರ್ಮಿಸಿರುವ ಈ ಭವ್ಯ ಮಂದಿರ ನಿಮಗಾಗಲಿ ಶಾಶ್ವತ ನಿವಾಸ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು