Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:19 - ಕನ್ನಡ ಸತ್ಯವೇದವು C.L. Bible (BSI)

19 ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಪ್ರಾರ್ಥನೆಗೆ ಲಕ್ಷ್ಯಕೊಡು ಎಂದು ನಿನ್ನನ್ನು ಬೇಡುತ್ತೇನೆ. ದೇವರಾದ ಯೆಹೋವನೇ, ನನ್ನ ಬೇಡಿಕೆಗಳನ್ನು ಮತ್ತು ಸ್ತೋತ್ರಗಳನ್ನು ಲಾಲಿಸು. ನಾನು ನಿನ್ನ ಸೇವಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:19
11 ತಿಳಿವುಗಳ ಹೋಲಿಕೆ  

“ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ.


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು