Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:20 - ಕನ್ನಡ ಸತ್ಯವೇದವು C.L. Bible (BSI)

20 ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:20
17 ತಿಳಿವುಗಳ ಹೋಲಿಕೆ  

ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.


ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.


ತಮ್ಮ ಮೇಲೆ ಖಡ್ಗವಿಧಿ, ಘೋರವ್ಯಾಧಿ, ಕ್ಷಾಮಡಾಮರ, ಮೊದಲಾದ ಆಪತ್ತುಗಳು ಬರುವಾಗ, ನಿಮ್ಮ ನಾಮಮಹಿಮೆ ಇರುವ ಈ ಆಲಯದ ಮುಂದೆಯೂ ನಿಮ್ಮ ಮುಂದೆಯೂ ನಿಂತು, ತಮ್ಮ ಇಕ್ಕಟ್ಟಿನಲ್ಲಿ ನಿಮಗೆ ಮೊರೆ ಇಡುವುದಾದರೆ ನೀವು ಆಲಿಸಿ ರಕ್ಷಿಸುವಿರಿ ಎಂದುಕೊಂಡರಷ್ಟೆ.


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು