2 ಪೂರ್ವಕಾಲ ವೃತ್ತಾಂತ 6:23 - ಕನ್ನಡ ಸತ್ಯವೇದವು C.L. Bible (BSI)23 ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕರ ನ್ಯಾಯತೀರಿಸು. ಕೇಡುಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಕೃತ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ. ಅಧ್ಯಾಯವನ್ನು ನೋಡಿ |
ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.