Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:28 - ಕನ್ನಡ ಸತ್ಯವೇದವು C.L. Bible (BSI)

28 “ನಾಡಿಗೆ ಕ್ಷಾಮ, ಘೋರವ್ಯಾಧಿ, ಬೆಳೆಗೆ ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೆಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆಯುಂಟಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೇಶಕ್ಕೆ ಕ್ಷಾಮ, ಘೋರವ್ಯಾದಿ, [ಬೆಳೆಗೆ] ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ ಅಂತು ಯಾವ ಉಪದ್ರವದಿಂದಾಗಲಿ ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:28
19 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.


ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.


ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಎಲ್ಲಾ ಇಸ್ರಯೇಲರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ, ದುಃಖಗಳ ನಿಮಿತ್ತ ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ,


ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲು, ನಾಡನ್ನು ನಾಶಮಾಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲು ಹಾಗೂ ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು