2 ಪೂರ್ವಕಾಲ ವೃತ್ತಾಂತ 6:33 - ಕನ್ನಡ ಸತ್ಯವೇದವು C.L. Bible (BSI)33 ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಕೇಳಿ ಅವರು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ಈ ಆಲಯವನ್ನು ನಿನ್ನ ಹೆಸರಿನದಾಗಿ ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿ |