Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:39 - ಕನ್ನಡ ಸತ್ಯವೇದವು C.L. Bible (BSI)

39 ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿ, ಅವರಿಗೆ ದಯೆ ತೋರಿಸಿ, ನಿಮಗೆ ವಿರುದ್ಧ ಪಾಪಮಾಡಿದ ನಿಮ್ಮ ಪ್ರಜೆಗೆ ಕ್ಷಮೆಯನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗೆ ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಿನ್ನ ವಾಸಸ್ಥಾನವಾಗಿರುವ ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯಮಾಡು. ನಿನಗೆ ವಿರುದ್ಧವಾಗಿ ಪಾಪಮಾಡಿದವರನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ, ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಕ್ಷಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:39
9 ತಿಳಿವುಗಳ ಹೋಲಿಕೆ  

ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ನೀವು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.


ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,


“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು