Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:4 - ಕನ್ನಡ ಸತ್ಯವೇದವು C.L. Bible (BSI)

4 “ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನನ್ನ ತಂದೆ ದಾವೀದನಿಗೆ ಅವರು ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದದ್ದನ್ನು ಆತನ ಹಸ್ತವು ಈಗ ನೆರವೇರಿಸಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಂತರ ಅರಸನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:4
17 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.


ಇಸ್ರಯೇಲ್ ದೇವರೇ, ಸರ್ವೇಶ್ವರಾ, ನೀವು ನಿಮ್ಮ ದಾಸ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು