Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:40 - ಕನ್ನಡ ಸತ್ಯವೇದವು C.L. Bible (BSI)

40 “ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನನ್ನ ದೇವರೇ, ಈ ಸ್ಥಳದಲ್ಲಿ ಪ್ರಾರ್ಥಿಸುವ ನಮ್ಮನ್ನು ವೀಕ್ಷಿಸಿ ನಮ್ಮ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿಮ್ಮ ಕಣ್ಣುಗಳು ತೆರೆದಿರಲಿ. ನಿಮ್ಮ ಕಿವಿಗಳು ಆಲಿಸುತ್ತಾ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:40
20 ತಿಳಿವುಗಳ ಹೋಲಿಕೆ  

ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II


ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II


ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II


ಸ್ವಾಮಿ ದೇವಾ, ನಾನೀಪರಿ ನಡೆದಿರೆ : ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


“ಹೇ ಸರ್ವೇಶ್ವರಾ, ನಿಮ್ಮ ದಾಸನಾದ ಅರಸನ ಮೇಲೆಯೂ ಪ್ರಜೆಗಳಾದ ಇಸ್ರಯೇಲರ ಮೇಲೆಯೂ ಕಟಾಕ್ಷವಿಟ್ಟು, ಅವರು ಪ್ರಾರ್ಥಿಸುವಾಗೆಲ್ಲಾ, ಅವರ ವಿಜ್ಞಾಪನೆಗಳನ್ನು ಆಲಿಸಿರಿ.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿ, ಅವರಿಗೆ ದಯೆ ತೋರಿಸಿ, ನಿಮಗೆ ವಿರುದ್ಧ ಪಾಪಮಾಡಿದ ನಿಮ್ಮ ಪ್ರಜೆಗೆ ಕ್ಷಮೆಯನ್ನು ಅನುಗ್ರಹಿಸಿರಿ.


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು